ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣ; ಪಾತಕಿ ಬನ್ನಂಜೆ ರಾಜಾ ಸೇರಿ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಹೊಸದಿಗಂತ ವರದಿ, ಬೆಳಗಾವಿ
ತೀವ್ರ ಕುತೂಹಲ ಮೂಡಿಸಿದ್ದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣದಲ್ಲಿ ಮಾಜಿ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಿ ಇಲ್ಲಿನ ಕೋಕಾ ನ್ಯಾಯಾಲಯ ಸೋಮವಾರ ಮಹತ್ವದ ತೀರ್ಪು ನೀಡಿದೆ.
2013 ಡಿಸೆಂಬರ್ 21ರಂದು ಅಂಕೋಲಾ ಉದ್ಯಮಿ ಆರ್.ಎನ್.ನಾಯಕ್‍ನನ್ನು 3 ಕೋಟಿ ರೂಪಾಯಿ ಹಫ್ತಾ ನೀಡದೇ ಇರುವುದಕ್ಕೆ ಸುಪಾರಿ ನೀಡಿ ಹತ್ಯೆ ಮಾಡಲಾಗಿತ್ತು. ಕಾರಿನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿ ಗುಂಡಿಕ್ಕಿ ಆರ್.ಎನ್.ನಾಯಕ್‍ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಕೋಕಾ ಕಾಯ್ದೆಯಡಿ ಕರ್ನಾಟಕ ಪಶ್ಚಿಮ ವಲಯದ ಪೊಲೀಸರು ಪ್ರಕರಣ ದಾಖಲಿಸಿದ್ದರು.
7 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಬೆಳಗಾವಿ ಕೋಕಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ್ ಜೋಶಿ ಅವರು ಮಾರ್ಚ 30ರಂದು ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ಮಹತ್ವದ ತೀರ್ಪನ್ನು ಪ್ರಕಟಿಸಿ, ಏ. 4 ರಂದು ಶಿಕ್ಷೆಯನ್ನು ಪ್ರಕಟಿಸುವುದಾಗಿ ಆದೇಶ ನೀಡಿದ ಅವರು ಸೋಮವಾರ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!