ಮುಡಾ ಸೈಟ್‌ ವಾಪಾಸ್‌ | ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣದ ಕುಣಿಕೆ ಸಿಎಂ ಸಿದ್ದರಾಮಯ್ಯಗೆ ಬಿಗಿಯಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆದ ಸೈಟುಗಳನ್ನು ವಾಪಸ್ ನೀಡುವ ನಿರ್ಧಾರ ಕೈಗೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷ ನಾಯಕ ಆರ್ ಅಶೋಕ್, ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ‘ದೊಡ್ದ’ ಮನಸ್ಸು ಮಾಡಿರುವುದು, ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ. ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ. ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರರ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!