ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಲಾಸ್ ನಲ್ಲಿ ಕನ್ನಡದಲ್ಲಿ ಉತ್ತರ ನೀಡಿದರು ಎನ್ನುವ ಕಾರಣಕ್ಕೆ ಉಪನ್ಯಾಸಕ ರೂಪೇಶ್ ಪುತ್ತೂರು ಅವರನ್ನ ವಜಾ ಮಾಡಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆರ್ ವಿ ಶಿಕ್ಷಣ ಸಂಸ್ಥೆ ಇದೀಗ ಎಚ್ಚೆತ್ತುಕೊಂಡಿದೆ. ಉಪನ್ಯಾಸಕ ರೂಪೇಶ್ ಅವರನ್ನ ವಜಾ ಮಾಡಿದ್ದಕ್ಕೆ ಬೆಂಗಳೂರಿನ ಆರ್.ವಿ ಪಿಯು ಲರ್ನಿಂಗ್ ಹಬ್ ಪ್ರಿನ್ಸಿಪಾಲ್ ಕ್ಷಮೆಯಾಚಿಸಿದ್ದು, ಉಪನ್ಯಾಸಕರಿಗೆ ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಕೇಳಿದ್ದ ಪ್ರಶ್ನೆಗೆ ಕನ್ನಡದಲ್ಲೇ ಉತ್ತರಿಸಿದ್ದಕ್ಕೆ ಉಪನ್ಯಾಸಕ ರೂಪೇಶ್ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಈ ಬಗ್ಗೆ ಉಪನ್ಯಾಸಕ ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದರು. ಬಳಿಕ ಕನ್ನಡ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಕಾಲೇಜಿಗೆ ಭೇಟಿ ಮಾಡಿ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ್ದು, ಬಳಿಕ ಉಪನ್ಯಾಸಕ ವಜಾವನ್ನು ವಾಪಸ್ ಪಡೆದುಕೊಂಡಿದೆ.
ಇತ್ತ ಜಂಟಿ ಕಾರ್ಯದರ್ಶಿ ನಾಗರಾಜ್ ನನಗೆ ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ನನಗೂ ಕನ್ನಡದ ಬಗ್ಗೆ ವಿಶ್ವಾಸ ಇದೆ. ಇದು ಸಹ ಕನ್ನಡದ ಸಂಸ್ಥೆ, ಮಕ್ಕಳಿಗೆ ಈ ಬಗ್ಗೆ ಕೌನ್ಸಲಿಂಗ್ ಕೈಗೊಳ್ಳುತ್ತೇವೆ. ರಾಜೀನಾಮೆಯನ್ನು ವಾಪಾಸ್ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ.