January19, 2026
Monday, January 19, 2026
spot_img

ಡಿಜಿಪಿ ಕಚೇರಿಯಲ್ಲೇ ರಾಸಲೀಲೆ?: ವೈರಲ್ ವಿಡಿಯೋ ಬೆನ್ನಲ್ಲೇ ರಾಮಚಂದ್ರರಾವ್ ಕಡ್ಡಾಯ ರಜೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ರನ್ಯಾರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಈ ಹಿಂದೆ ಸುದ್ದಿಯಾಗಿದ್ದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರರಾವ್ ಅವರು ಈಗ ಮತ್ತೊಂದು ಗಂಭೀರ ವಿವಾದಕ್ಕೆ ಸಿಲುಕಿದ್ದಾರೆ. ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ಮತ್ತು ಆಡಿಯೋ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಸರ್ಕಾರ ಅವರನ್ನು 10 ದಿನಗಳ ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ.

ವೈರಲ್ ವಿಡಿಯೋಗಳ ಕುರಿತು ಪ್ರತಿಕ್ರಿಯಿಸಿರುವ ರಾಮಚಂದ್ರರಾವ್ ಅವರ ಹೇಳಿಕೆಗಳು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿವೆ. ಒಂದು ಕಡೆ, “ಇದು ಯಾರೋ AI ಬಳಸಿ ಮಾಡಿರುವ ಪಿತೂರಿ” ಎಂದು ಸಮರ್ಥಿಸಿಕೊಂಡರೆ, ಮತ್ತೊಂದು ಕಡೆ “ಇದು 8 ವರ್ಷಗಳ ಹಳೆಯ ವಿಡಿಯೋ” ಎನ್ನುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ಈ ಪರಸ್ಪರ ವಿರೋಧಿ ಹೇಳಿಕೆಗಳು ತನಿಖೆಯ ಅಗತ್ಯತೆಯನ್ನು ಒತ್ತಿಹೇಳಿವೆ.

ವಿಡಿಯೋ ಬಯಲಾಗುತ್ತಿದ್ದಂತೆ ಸಚಿವರ ಭೇಟಿಗೆ ಮುಂದಾದ ರಾಮಚಂದ್ರರಾವ್ ಅವರಿಗೆ ಮುಖಭಂಗವಾಗಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರು ಮನೆಯಲ್ಲಿದ್ದರೂ ಡಿಜಿಪಿಯನ್ನು ಭೇಟಿ ಮಾಡಲು ನಿರಾಕರಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣ ನಿಲುವು ತಳೆದಿದ್ದು, “ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ಎಚ್ಚರಿಸಿ ಶಿಸ್ತು ಕ್ರಮಕ್ಕೆ ಸೂಚಿಸಿದ್ದಾರೆ.

Must Read