ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ರೇಸ್ ಕೋರ್ಸ್ (Race Course) ರಸ್ತೆಗೆ (Road) ಕನ್ನಡ ಹಿರಿಯ ನಟ ಅಂಬರೀಶ್ (Ambarish) ಅವರ ಹೆಸರನ್ನು ಇಡಲು ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!