ಬಹುನಿರೀಕ್ಷೆಯ ರಾಧೆ ಶ್ಯಾಮ್‌ ಸಿನಿಮಾದ ರಿಲೀಸ್‌ ಡೇಟ್‌ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊರೋನಾ ಸೋಂಕು ಉಲ್ಬಣ ಆಗುತ್ತಿದ್ದಂತೆ ಸಿನಿರಂಗಕ್ಕೆ ಮತ್ತೆ ಹೊಡೆತ ಬಿದ್ದಿದೆ. ಈ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ತಮ್ಮ ರಿಲೀಸ್‌ ಡೇಟ್‌ ಗಳನ್ನು ಮುಂದಕ್ಕೆ ಹಾಕಿಕೊಂಡಿವೆ.
ಇದೀಗ ಪ್ರಭಾಸ್‌ ನಟನೆಯ ಬಹುನಿರೀಕ್ಷಿತ ಸಿನಿಮಾ ರಾಧೆ ಶ್ಯಾಮ್‌ ಸಿನಿಮಾ ಕೂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡ ನಟಿ ಪೂಜಾ ಹೆಗ್ಡೆ, ಕೋವಿಡ್‌ ನಿಂದಾಗಿ ನಾವು ರಾಧೆ ಶ್ಯಾಮ್‌ ಚಿತ್ರದ ಬಿಡುಗಡೆಯನ್ನು ಮುಂದೂಡಬೇಕಾಗಿದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾಗಳು. ಶೀಘ್ರದಲ್ಲಿ ತೆರೆ ಮೇಲೆ ಬರಲಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಈ ಚಿತ್ರಕ್ಕೆ ರಾಧಾಕೃಷ್ಣ ಕುಮಾರ್​ ನಿರ್ದೇಶನ ಮಾಡಿದ್ದು, ಇದು ತೆಲುಗು, ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ತೆರೆಕಾಣಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!