October 10, 2026
Saturday, October 10, 2026
spot_img

ಮತ್ತೆ ಬೆಳ್ಳಿತೆರೆಗೆ ರಾಧಿಕಾ ಕುಮಾರಸ್ವಾಮಿ ಎಂಟ್ರಿ: ಈ ಬಾರಿ ಯಾವ ಸಿನಿಮಾದಲ್ಲಿ ನಟಿಸ್ತಾರೆ ಸ್ಯಾಂಡಲ್‌ವುಡ್ ಸ್ವೀಟಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮಾಡಿಸಿದ್ದ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಬೆಳ್ಳಿ ತೆರೆಗೆ ಬರಲು ಸಜ್ಜಾಗಿದ್ದು, ಆದರೆ ಈ ಬಾರಿ ಕನ್ನಡವಲ್ಲ ಬದಲಾಗಿ ಮಲಯಾಳಂ ಚಿತ್ರರಂಗಕ್ಕೆ ಲಗ್ಗೆ ಇಟ್ಟಿದ್ದಾರೆ.

ಈಗಾಗಲೇ ಕನ್ನಡದ ಜೊತೆ ಜೊತೆಯಲ್ಲಿ ತೆಲುಗು ಮತ್ತು ತಮಿಳು ಚಿತ್ರಗಳಲ್ಲೂ ತಮ್ಮ ಅಭಿನಯದ ಮೂಲಕ ಸೈ ಎನಿಸಿಕೊಂಡಿರುವ ರಾಧಿಕಾ ಮಲಯಾಳಂ ಸಿನಿಮಾದತ್ತ ಮುಖ ಮಾಡಿದ್ದಾರೆ.

ಈ ಕುರಿತು ಖುದ್ದು ಮಾಹಿತಿ ನೀಡಿದ ರಾಧಿಕಾ, ಮಲಯಾಳಂ ಚಿತ್ರದಿಂದ ಆಫರ್ ಬಂದಿದ್ದು, ಕಥೆ ಕೇಳಿದ ತಕ್ಷಣ ಇಷ್ಟವಾಯಿತು. ಸದ್ಯ ಡೇಟ್ಸ್ ಕುರಿತು ಮಾತುಕತೆ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅಧಿಕೃತ ಘೋಷಣೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ, ಮತ್ತೆ ಸಿನಿಮಾಕ್ಕೆ ರಾಧಿಕಾ ಕುಮಾರಸ್ವಾಮಿ ಅವರ ಎಂಟ್ರಿ ಅಭಿಮಾನಿಗಳಿಗೆ ಖುಷಿ ತಂದಿದೆ.

Must Read