Friday, November 21, 2025

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್‌: ಕೊನೆಗೂ ರೆಡಿಯಾಲಾಜಿಸ್ಟ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೆಡಿಯಾಲಾಜಿಸ್ಟ್ ಜಯಕುಮಾರ್ ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಜಯಕುಮಾರ್ ಬಂಧನಕ್ಕೆ ಆಗ್ರಹಿಸಿ ನಿನ್ನೆ ಧರಣಿ ನಡೆದಿತ್ತು ಕರ್ನಾಟಕ ತಕ್ಷಣ ವೇದಿಕೆ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದರು ಘಟನೆ ನಡೆದು 10 ದಿನ ಕಳೆದರೂ ಆರೋಪಿಯನ್ನು ಬಂಧಿಸಿಲ್ಲ. ಈ ಕೂಡಲೇ ಆನೇಕಲ್ ಪೊಲೀಸರು ಆರೋಪಿಯನ್ನು ಬಂಧಿಸಬೇಕು ಇಲ್ಲದಿದ್ದರೆ ಆನೇಕಲ್ ಪಟ್ಟಣ ಬಂದ್ ಮಾಡುವ ಎಚ್ಚರಿಕೆ ನೀಡಲಾಗಿತ್ತು.

ಇದೀಗ ಆನೇಕಲ್ ಠಾಣೆ ಪೊಲೀಸರು ಪಾಲಿಸಲು ಆರೋಪಿ ಜಯಕುಮಾರ್ ಅರೆಸ್ಟ್ ಮಾಡಿದ್ದಾರೆ.

ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಜೈ ಕುಮಾರ್ ಲೈಂಗಿಕ ಕಿರುಕುಳ ನೀಡಿದ್ದನು .

error: Content is protected !!