ಹೊಸದಿಗಂತ ವರದಿ ಶಿವಮೊಗ್ಗ :
ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಮಾನ ತೆಗೆಯುತ್ತಿದ್ದಾರೆ. ಅಲ್ಲಿ ಹೋಗಿ ಚೀನಾವನ್ನು ಹೊಗಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮೋಹನ್ ವಿಶ್ವ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೀಸಲಾತಿ ರದ್ದು ಪಡಿಸಬೇಕೆಂದು ಹೇಳಿದ್ದಾರೆ. ಕಾಂಗ್ರೆಸ್ ನದ್ದು ಮೀಸಲಾತಿ ವಿರೋಧಿ ಮನಸ್ಥಿತಿ. ನೆಹರೂ ಕಾಲದಿಂದಲೂ ಮೋಸಲಾತಿ ವಿರೋಧಿ ನೀತಿ ಅನುಸರಿಸಿಕೊಂಡು ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ದಲಿತ ವಿರೋಧಿ ನೀತಿಯನ್ನು ರಾಜ್ಯ ಸರ್ಕಾರ ಅನುಸರಿಸಿಲುತ್ತಿದೆ. ಎಸ್ ಸಿ ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿದೆ ಎಂದು ದೂರಿದರು.
ನಾಗಮಂಗಲ ಗಲಭೆಗೆ ಕಾಂಗ್ರೆಸ್ ನ ಋಣ ಸಂದಾಯ ಮನಸ್ಥಿತಿಯೇ ಕಾರಣ. ಚುನಾವಣೆಯಲ್ಲಿ ಒಂದು ಕೋಮಿನ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಅವರ ಋಣ ತೀರಿಸಲು ಮುಂದಾಗಿದೆ ಎಂದು ದೂರಿದರು.