ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧ್ಯಕ್ಷ ಟ್ರಂಪ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅವರಿಗೆ ಪತ್ರವನ್ನೂ ಬರೆದಿದ್ದಾರೆ.
ಕಮಲಾ ಹ್ಯಾರಿಸ್ ಅವರ ಅಧ್ಯಕ್ಷೀಯ ಪ್ರಚಾರಕ್ಕಾಗಿ ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ತಿಳಿಸಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರಾಗಿರುವ ಟ್ರಂಪ್ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಿಮ್ಮ ನಾಯಕತ್ವದಲ್ಲಿ, ಎರಡೂ ದೇಶಗಳು ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಗಾಢವಾಗಿಸುತ್ತವೆ ಎಂದು ನಮಗೆ ವಿಶ್ವಾಸವಿದೆ. ಭಾರತೀಯರು ಮತ್ತು ಅಮೆರಿಕ ತಮ್ಮನ್ನು ತಾವು ಸಬಲೀಕರಣಗೊಳಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನಿಮ್ಮ ಅಧ್ಯಕ್ಷೀಯ ಪ್ರಚಾರಕ್ಕೆ ಅಭಿನಂದನೆಗಳು. ನಿಮ್ಮ ಭರವಸೆಯ ಏಕೀಕೃತ ಸಂದೇಶವು ಅನೇಕರನ್ನು ಪ್ರೇರೇಪಿಸುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಲ್ಲಿ ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದು ಕಮಲಾ ಹ್ಯಾರಿಸ್ ಅವರಿಗೆ ರಾಹುಲ್ ಪತ್ರ ಬರೆದಿದ್ದಾರೆ.