ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ ಹಾಗೂ ಮುಡಾ ಅವ್ಯವಹಾರವನ್ನು ವಿರೋಧಿಸಿ ಬಿಜೆಪಿ ಇಂದು ಸಿಎಂ ಮನೆಗೆ ಮುತ್ತಿಗೆ ಹಾಕಲಿದೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ
ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕನಾಗಿ ಮಾಡಿದ ಚೊಚ್ಚಲ ಭಾಷಣವು ಆಧಾರರಹಿತ ಆರೋಪ ಮತ್ತು ಸುಳ್ಳುಗಳಿಂದ ತುಂಬಿತ್ತು. ರಾಹುಲ್ ಗಾಂಧಿ ಇಡೀ ಹಿಂದೂ ಸಮುದಾಯವನ್ನು ಅವಮಾನಿಸಿದ್ದಾರೆ, ಅವರು ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಎಸ್ಟಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಮತ್ತಿತರರು ಇಂದು ಬೆಳಗ್ಗೆ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.