ವಸತಿ ಯೋಜನೆಗಿಲ್ಲ ರಾಘಣ್ಣನ ಇಚ್ಛಾಶಕ್ತಿ!

ಹೊಸದಿಗಂತ ವರದಿ ಕೊಪ್ಪಳ:

ಸರ್ಕಾರದ ಯಾವುದೇ ಯೋಜನೆಯಾಗಲಿ ಸ್ಥಳೀಯ ಶಾಸಕರ ಇಚ್ಛಾಶಕ್ತಿ ಇದ್ದರೆ, ಅದು ಪರಿಪೂರ್ಣವಾಗಿ ಫಲಾನುಭವಿಗಳಿಗೆ ಸೇರುತ್ತವೆ. ಆದರೆ, ಕೊಪ್ಪಳ ನಗರಸಭೆ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ವಸತಿ ಯೋಜನೆ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಸ್ಥಳೀಯ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ನಿರಾಸಕ್ತಿ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.

ಕೊಪ್ಪಳ ನಗರಸಭೆ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ 1795 ಮನೆಗಳ ನಿರ್ಮಾಣ ಗುರಿ ನೀಡಲಾಗಿತ್ತು. ಆದರೆ, ಈ ವರೆಗೆ 116 ಮನೆಗಳು ಮಾತ್ರ ನಿರ್ಮಾಣವಾಗಿವೆ. ಶೇ. 8 ರಷ್ಟು ಮಾತ್ರ ಗುರಿ ಸಾಧನೆಯಾಗಿದೆ. ಈ ವೈಫಲ್ಯಕ್ಕೆ ಕಾರಣ ಅಧಿಕಾರಿಗಳು ಹಾಗೂ ಶಾಸಕರೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ವಸತಿ ಯೋಜನೆಗೆ ಹಲವು ತಿಂಗಳಿನಿಂದ ಅನುದಾನವೇ ಬಂದಿಲ್ಲ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕಾದ ಶಾಸಕರೇ ಇಚ್ಛಾಶಕ್ತಿ ತೋರದಿರುವುದರಿಂದಾಗಿ ಯೋಜನೆ ನೆನಗುದಿಗೆ ಬಿದ್ದಿದೆ‌. ಕೊಪ್ಪಳ ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತವಿದೆ. ಆದರೂ, ವಸತಿ ಯೋಜನೆ ಪೂರ್ಣಗೊಳಿಸುವಲ್ಲಿ ಅಧಿಕಾರಿಗಳು ಹಾಗೂ ಶಾಸಕರು ವಿಫಲರಾಗಿದ್ದಾರೆ.

ವಸತಿ ಯೋಜನೆಯು ಗಂಗಾವತಿ ನಗರಸಭೆ ಹಾಗೂ ಕುಕನೂರು ಪಟ್ಟಣ ಪಂಚಾಯತಿ ಯಲ್ಲಿ ಉತ್ತಮ ಫಲಿತಾಂಶ ಸಿಕ್ಕಿದೆ. ಆದರೆ, ಕೊಪ್ಪಳ ನಗರಸಭೆ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿಯಲ್ಲಿ ಸಾಧನೆ ಮಾತ್ರ ಬೆರಳೆಣಿಕೆಯಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!