August 21, 2026
Friday, August 21, 2026
spot_img

ರಾಘವೇಶ್ವರ ಭಾರತೀ ಶ್ರೀ ಅನ್ನಬ್ರಹ್ಮ ಚಾತುರ್ಮಾಸ್ಯ: ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಸಮರ್ಪಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಸಂದರ್ಭ ಪಾರಂಪರಿಕವಾಗಿ ಶ್ರೀರಾಮಚಂದ್ರಾಪುರ ಮಠಕ್ಕೆ ನಡೆದುಕೊಳ್ಳುತ್ತಿರುವ ನಾಮಧಾರಿ ಸಮಾಜದ ಗುರುಬಂಧುಗಳಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು.


ಪೂಜೆಯನ್ನು ಸ್ವೀಕರಿಸಿ ಸಮಾಜವನ್ನು ಆಶೀರ್ವದಿಸಿದ ಶ್ರೀಗಳು, ಪರಸ್ಪರ ಗುರು ಶಿಷ್ಯರ ಭೇಟಿ ಆಗಾಗ ನಡೆದಾಗ ಬಾಂಧವ್ಯ ಗಟ್ಟಿಯಾಗಲು ಸಾಧ್ಯ. ಗುರುಪರಂಪರೆಯ ಅನುಗ್ರಹ ಈ ಸಮಾಜದ ಮೇಲೆ ಸದಾ ಇರಲಿದ್ದು, ಸಮಾಜದ ಆಗುಹೋಗುಗಳ ಜೊತೆಗೆ ಶ್ರೀಮಠ ಸದಾ ಇರಲಿದೆ ಎಂದರು. ನಾಮಧಾರಿ ಸಮಾಜದ ಕುಮಟಾ ತಾಲೂಕಾ ಅಧ್ಯಕ್ಷ ಅರುಣಕುಮಾರ ಜಿ. ನಾಯ್ಕ, ಶೇಖರ ನಾಯ್ಕ, ಹರೀಶ ನಾಯ್ಕ, ಅಶೋಕ ನಾಯ್ಕ ಸೇರಿದಂತೆ ಸಮಾಜ ಬಂಧುಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !