ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಮುಂದಿನ ತಿಂಗಳಿಂದ ರಾಗಿ ಮಾಲ್ಟ್ ಭಾಗ್ಯ ಯೋಜನೆಗೆ ಚಾಲನೆ ನೀಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮಾಹಿತಿ ನೀಡಿದ ಅವರು, ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ (Ragi Malt) ಕೊಡುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಇನ್ನೂ ರಾಜ್ಯದಲ್ಲಿ SEP ಅನುಷ್ಠಾನ ಆಗಲಿದೆ. ಈ ಬಗ್ಗೆ ಮೊದಲ ಸಭೆ ಆಗಿದೆ. ಎಸ್ಇಪಿ ಜಾರಿ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆ ಜಾರಿಯಾಗಲಿದೆ ಎಂದು ತಿಳಿಸಿದರು.