Friday, August 12, 2022

Latest Posts

ರ್‍ಯಾಗಿಂಗ್ ಪ್ರಕರಣ: ಆರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್

ನಗರದ ಫಳ್ನೀರ್‌ನ ಇಂದಿರಾ ಕಾಲೇಜಿನಲ್ಲಿ ನಡೆದ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದೇ ಕಾಲೇಜಿನ ಒಟ್ಟು ಆರು ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿಗಳಾದ ಶ್ರೀಲಾಲ್ (20), ಶಾಹಿದ್ (20), ಅಮ್ಜದ್(20),ಜುರೈಜ್ (20), ಹುಸೈನ್(20),ಲಿಮ್ಸ್ (20) ಬಂಧಿತ ಆರೋಪಿಗಳು. ಜು.14ರಂದು ರಾತ್ರಿ 8 ಗಂಟೆಗೆ ನಗರದ ಫಳ್ನೀರ್ ರಸ್ತೆಯ ಹೊಟೇಲೊಂದಕ್ಕೆ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು (21) ಎಂಬವರು ತನ್ನ ಸ್ನೇಹಿತರಾದ ಜೋಬಿನ್ ಹಾಗೂ ಶಾಕೀರ್ ಅವರ ಜೊತೆಗೆ ಊಟಕ್ಕಾಗಿ ತೆರಳಿದ್ದು, ಈ ಸಂದರ್ಭ ಆರೋಪಿ ವಿದ್ಯಾರ್ಥಿಗಳು ರ್‍ಯಾಗಿಂಗ್ ನಡೆಸಿದ್ದಾರೆ. ಅಲ್ಲದೆ ನಂತರ ರಾತ್ರಿ 10.30ರ ಸುಮಾರಿಗೆ ಅತ್ತಾವರದ ಅಪಾರ್ಟ್‌ಮೆಂಟ್‌ನ ರೂಮಿನಲ್ಲಿ ಮ್ಯಾನುಯಲ್ ಇದ್ದ ಸಂದರ್ಭ ಆರು ಆರೋಪಿಗಳು ಮಾರಕಾಯುಧ ಸಹಿತ ಆಗಮಿಸಿ ರ್‍ಯಾಗಿಂಗ್ ನಡೆಸಿದ್ದಾರೆ. ಅಲ್ಲದೆ ಹಲ್ಲೆ ಮಾಡಿದ್ದು, ಜೀವ ಬೆದರಿಕೆಯನ್ನೂ ಒಡ್ಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss