Tuesday, June 28, 2022

Latest Posts

ಕೊರೋನಾ ವಾರಿಯರ್ಸ್ ಗಳಿಗೆ ಊಟ ಹಂಚುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ನಟಿ ರಾಗಿಣಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಟಿ ರಾಗಿಣಿ ಕೊರೋನಾ ವಾರಿಯರ್ಸ್ ಗೆ ಸಹಾಯ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ತಮ್ಮ ಜೆನ್ ಟೆಕ್ಸ್ ಎಂಬ ಟ್ರಸ್ಟ್ ನ ಅಡಿಯಲ್ಲಿ ಚಿತಾಗಾರವೊಂದಕ್ಕೆ ತೆರಳಿ ಅಲ್ಲಿಯ ಸಿಬ್ಬಂದಿಗೆ ಊಟ ಹಂಚುವ ಕೆಲಸ ಮಾಡಿದ್ದಾರೆ. ಈ ಹಿಂದೆ ಕೊರೋನಾ ಮೊದಲನೇ ಅಲೆ ಕಾಣಿಸಿಕೊಂಡಾಗ ನಟಿ ರಾಗಿಣಿ ಬಡವರಿಗೆ ಊಟ ಹಂಚಿದ್ದರು.
ಕೊರೋನಾ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಚಿತಾಗಾರದಲ್ಲಿ ಕೆಲಸ ಮಾಡುವವರು ದಿನವಿಡೀ ಬಿಡುವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಚಿತಾಗಾರವೊಂದಕ್ಕೆ ತೆರಳಿದ ನಟಿ ರಾಗಿಣಿ ಅಲ್ಲಿನ ಸಿಬ್ಬಂದಿಗಳಿಗೆ ಊಟ ಹಂಚಿ ರೇಷನ್ ಕೂಡ ವಿತರಿಸಿದ್ದಾರೆ. ರಾಗಿಣಿ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss