ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 4 ರನ್ಗಳ ರೋಚಕ ಜಯ ಸಾಧಿಸಿದೆ.
ಲಕ್ನೋ ನೀಡಿದ್ದ 239ರನ್ಗಳ ಗುರಿಯನ್ನ ಬೆನ್ನಟ್ಟಿದ ಕೆಕೆಆರ್ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 234 ರನ್ಗಳಿಸಿತು.
ನಾಯಕ ರಹಾನೆ (61), ವೆಂಕಟೇಶ್ ಅಯ್ಯರ್ (45) ಹಾಗೂ ರಿಂಕು ಸಿಂಗ್ (ಅಜೇಯ 38) ರನ್ ಗಳಿಸಿ ಗೆಲುವಿಗಾಗಿ ಹೋರಾಟ ನಡೆಸಿದರೂ ಗುರಿ ತಲುಪುವಲ್ಲಿ ವಿಫಲವಾದರು.
ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ, 3 ವಿಕೆಟ್ ಕಳೆದುಕೊಂಡು 238 ರನ್ಗಳ ಬೃಹತ್ ಮೊತ್ತ ದಾಖಲಿಸಿತ್ತು. ಇದನ್ನು ಬೆನ್ನತ್ತಿದ್ದ ಕೆಕೆಆರ್ , ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 234 ರನ್‌ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು. ಕೆಕೆಆರ್ ಪರ ರಹಾನೆ 35 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 61 ರನ್ ಗಳಿಸಿದರೆ, ರಿಂಕು 15 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ ಅಜೇಯ 38 ರನ್ ಗಳಿಸಿದರು.