ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದಲ್ಲಿ ನಡೆದ ರಾಹುಲ್ ಭಟ್ ಕೊಲೆಯು ಉದ್ಧೇಶಿತ ಸಂಚಾಗಿದ್ದು ಆತನನ್ನೇ ಗುರಿಯಾಗಿಸಿ ಕೊಲೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ರಾಹುಲ್ ಭಟ್ ಕೊಲೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವೊಂದನ್ನು ರಚಿಸಲಾಗಿದ್ದು ಘಟನೆಯನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುವುದು. ಪ್ರತಿಭಟನಾ ನಿರತ ಕಾಶ್ಮೀರಿ ಪಂಡಿತರ ಮೇಲೆ ಬಲಪ್ರಯೋಗ ನಡೆಸಿರುವ ಕುರಿತೂ ತನಿಖೆಯಾಗಲಿದೆ ಎಂದು ಹೇಳಿದ್ದಾರೆ.
ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ವಿದೇಶಿ ಭಯೋತ್ಪಾದಕರನ್ನು ಪೊಲೀಸರು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದ್ದಾರೆ. ಎಲ್ಲಿಯೂ ಬಲಪ್ರಯೋಗ ಮಾಡದಂತೆ ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಹತ್ಯೆಯಲ್ಲಿ ಕೆಲವು ಅಧಿಕಾರಿಗಳೂ ಭಾಗಿಯಾಗುರುವ ಕುರಿತು ಅನುಮಾನ ಗಳಿದ್ದು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮನೋಜ್ ಸಿನ್ಹಾ ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.