ತೆಲಂಗಾಣ ಭಾರತ್ ಜೋಡೋ ಯಾತ್ರೆಯಲ್ಲಿ ಬುಡಕಟ್ಟು ಜನರೊಂದಿಗೆ ಹೆಜ್ಜೆ ಹಾಕಿದ ರಾಹುಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ತೆಲಂಗಾಣದ ಧರ್ಮಪುರದಿಂದ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ನೃತ್ಯದಲ್ಲಿ ಭಾಗವಹಿಸಿದರು.

ತೆಲಂಗಾಣದ ಭದ್ರಾಚಲಂನಲ್ಲಿ ಆದಿವಾಸಿಗಳೊಂದಿಗೆ “ಕೊಮ್ಮು ಕೋಯಾ” ಪುರಾತನ ಕಲಾ ಪ್ರಕಾರದ ನೃತ್ಯದಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದರು ಬುಡಕಟ್ಟು ಶಿರಸ್ತ್ರಾಣವನ್ನು ಧರಿಸಿ ಅವರೊಂದಿಗೆ ಸಾಂಪ್ರದಾಯಿಕ ನೃತ್ಯ ಮಾಡಿದರು,

ಇದಕ್ಕೂ ಮೊದಲು, 3 ದಿನಗಳ ದೀಪಾವಳಿ ವಿರಾಮದ ನಂತರ ತೆಲಂಗಾಣದ ನಾರಾಯಣಪೇಟ್ ಜಿಲ್ಲೆಯಿಂದ ತಮ್ಮ ಯಾತ್ರೆಯನ್ನು ಪುನರಾರಂಭಿಸಿದ ರಾಹುಲ್ ಗಾಂಧಿ ಸ್ಥಳೀಯ ಕಲಾವಿದರೊಂದಿಗೆ ಡೊಲು ಬಾರಿಸಿದರು.

ಮಾಜಿ ಕಾಂಗ್ರೆಸ್ ಅಧ್ಯಕ್ಷರು ಬುಡಕಟ್ಟು ಸಂಗೀತಕ್ಕೆ ನೃತ್ಯ ಮಾಡಿದ್ದು ಇದೇ ಮೊದಲಲ್ಲ. 2019ರಲ್ಲಿ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!