ಹೊಸದಿಗಂತ ಡಿಜಿಟಲ್ ಡೆಸ್ಕ್;
IPL 2025 ರಲ್ಲಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ.
ದ್ರಾವಿಡ್ ತಕ್ಷಣದಿಂದ ಜಾರಿಗೆ ಬರುವಂತೆ ಫ್ರಾಂಚೈಸಿಯ ಮುಖ್ಯ ತರಬೇತುದಾರರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಮುಂಬರುವ ಮೆಗಾ ಹರಾಜು ಸೇರಿದಂತೆ 2025 ರ ಋತುವಿನ ಯೋಜನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಕುರಿತಂತೆ ರಾಜಸ್ಥಾನ್ ರಾಯಲ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಟೀಂ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ವಾಪಸಾಗಲಿದ್ದಾರೆ ಎಂದಿದೆ.
ವಿಶ್ವಕಪ್ ನಂತರ, ಮತ್ತೊಂದು ಸವಾಲನ್ನು ಸ್ವೀಕರಿಸಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ, ಮತ್ತು ರಾಯಲ್ಸ್ ಅದನ್ನು ಮಾಡಲು ಸೂಕ್ತ ಸ್ಥಳವಾಗಿದೆ ಎಂದು ದ್ರಾವಿಡ್ ಹೇಳಿದರು .