ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ನಡೆದ ಗುಂಡಿನ ದಾಳಿ ಘಟನೆಯನ್ನು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಖಂಡಿಸಿದರು.
“ಮಾಜಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನದಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಅಂತಹ ಕೃತ್ಯಗಳನ್ನು ಸಾಧ್ಯವಾದಷ್ಟು ಖಂಡಿಸಬೇಕು. ಟ್ರಂಪ್ ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ರಾಹುಲ್ ಗಾಂಧಿ ಹಾರೈಸಿದ್ದಾರೆ.