Wednesday, September 3, 2025

ರಾಹುಲ್ ಗಾಂಧಿ ಮತ ಕಳ್ಳತನ ಆರೋಪ: ಕಾಂಗ್ರೆಸ್ ನಾಯಕ ಶಶಿ ತರೂರ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ಅಕ್ರಮಗಳ ಆರೋಪಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲ ನೀಡಿದ್ದಾರೆ.

ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಮತ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯಿಸಿದ ತರೂರ್, ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದೊಂದಿಗೆ ಬಿಜೆಪಿ ಶಾಮೀಲಾಗಿ ಚುನಾವಣೆಯಲ್ಲಿ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪುರಾವೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಶಿ ತರೂರ್ ಬೆಂಬಲ ಸೂಚಿಸಿದ್ದಾರೆ.

ಇವು ಗಂಭೀರ ಪ್ರಶ್ನೆಗಳು. ಎಲ್ಲ ಪಕ್ಷಗಳು ಮತ್ತು ಮತದಾರರ ಹಿತಾಸಕ್ತಿಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ನಮ್ಮ ಪ್ರಜಾಪ್ರಭುತ್ವವು ತುಂಬಾ ಅಮೂಲ್ಯವಾದುದು. ಅಸಮರ್ಥತೆ, ನಿರ್ಲಕ್ಷ್ಯ ಅಥವಾ ಉದ್ದೇಶಪೂರ್ವಕ ತಿರುಚುವಿಕೆಯಿಂದ ಅದರ ವಿಶ್ವಾಸಾರ್ಹತೆಯನ್ನು ಹಾಳುಮಾಡಲು ಬಿಡಬಾರದು. ಚುನಾವಣಾ ಆಯೋಗವು ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ದೇಶಕ್ಕೆ ಮಾಹಿತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ