ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮತ ಕಳ್ಳತನ’ ಆರೋಪ ದೇಶಾದ್ಯಂತ ಸಾಕಷ್ಟು ಚರ್ಚೆ ಹಾಗೂ ಟೀಕೆಗಳಿಗೆ ಗುರಿಯಾಗಿದೆ. ಈ ನಡುವೆ ನಾಳೆ ಭಾರತೀಯ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿಯನ್ನು ಕರೆದಿದೆ.
ನಾಳೆ ಮಧ್ಯಾಹ್ನ 3:00 ಗಂಟೆಗೆ, ದೆಹಲಿಯ ರೈಸಿನಾ ರಸ್ತೆಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಇದೇ ಮೊದಲ ಬಾರಿಗೆ ಆಯೋಗ ಸುದ್ದಿಗೋಷ್ಠಿ ನಡೆಸುತ್ತಿದೆ. ಪಿಐಬಿಯಿಂದ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಟಿವಿ ಕ್ಯಾಮೆರಾ ಮ್ಯಾನ್ ಗಳಿಗೆ ಮಾತ್ರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಠರಣೆ ವಿರುದ್ಧ ರಾಹುಲ್ ಗಾಂಧಿ ನಾಳೆಯಿಂದ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸುವ ಮೂಲಕ ಆಯೋಗದ ವಿರುದ್ಧ ನೇರ ಹಣಾಹಣಿಗೆ ಮುಂದಾಗಿರುವಂತೆ ಚುನಾವಣಾ ಆಯೋಗ ಇದೀಗ ದಿಢೀರ್ ಸುದ್ದಿಗೋಷ್ಠಿ ಕರೆದಿದೆ.