ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಸದಸ್ಯತ್ವ ಅನರ್ಹತೆ ವಾಪಾಸ್ ಪಡೆದ ಬಳಿಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಸಂಸತ್ತಿಗೆ ಆಗಮಿಸಿದ್ದು, ಇಂಡಿಯಾ ಮೈತ್ರಿಕೂಟ ನಾಯಕರಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಸಂದಸದರು ಮತ್ತು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (I.N.D.I.A) ಮೈತ್ರಿಕೂಟದ ನಾಯಕರು ರಾಹುಲ್ ಗಾಂಧಿಯವರನ್ನು ‘ರಾಹುಲ್ ಗಾಂಧಿ ಜಿಂದಾಬಾದ್’ ಎಂಬ ಘೋಷಣೆಗಳ ಮೂಲಕ ಸ್ವಾಗತಿಸಿದರು.
ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿಧಿಸಲಾಗಿದ್ದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ನಂತರ ಇಂದು ಲೋಕಸಭೆಯ ಸ್ಪೀಕರ್ ಸಂಸತ್ ಸ್ಥಾನದ ಅನರ್ಹತೆಯನ್ನು ಮತ್ತೆ ಪಡೆದರು. ಈ ಹಿನ್ನೆಲೆಯಲ್ಲಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದ್ದು, ಸಂಸತ್ತಿನ ಹೊರಗೆ ಕಾಂಗ್ರೆಸ್ ನಾಯಕರು ಸಿಹಿ ಹಂಚುತ್ತಿರುವ ದೃಶ್ಯವೂ ಕಂಡುಬಂದಿದೆ.
ಟ್ವಿಟರ್ ಬಯೋ ಚೇಂಜ್
ರಾಹುಲ್ ಗಾಂಧಿಯವರು ಇದೀಗ ತಮ್ಮ ಟ್ವಿಟರ್ ಖಾತೆಯ ಬಯೋವನ್ನು ಕೂಡ ಸಂಸದ ಎಂಬುದಾಗಿ ಬದಲಿಸಿದ್ದಾರೆ. ಇದೀಗ ಅವರಿಗೆ ಸಂಸದ ಸ್ಥಾನದ ಸಕಲ ಸೌಲಭ್ಯಗಳು ಮತ್ತೆ ಸಿಗಲಿವೆ.