ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಶುಕ್ರವಾರ ರಾಹುಲ್ ಗಾಂಧಿ ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಆಗಮಿಸಿದ ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಮತ್ತು ಅಶೋಕ್ ಗೆಹ್ಲೋಟ್ ಉಪಸ್ಥಿತರಿದ್ದರು.
ಇಂದು ಬೆಳಗ್ಗೆಯಷ್ಟೇ ಕಾಂಗ್ರೆಸ್ ಪಕ್ಷವು ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿತ್ತು. ಇದಾದ ಕೆಲವೇ ಹೊತ್ತಿನ ನಂತರ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಈ ಹಿಂದೆ ರಾಹುಲ್ ಗಾಂಧಿ ಅಮೇಠಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅಮೇಠಿ ಬದಲಿಗೆ ರಾಯ್ ಬರೇಲಿಯಿಂದ ರಾಹುಲ್ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.