ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿ ಹಿಂದುಗಳನ್ನು ಹಿಂಸಾತ್ಮಕ ಎಂದು ಕರೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದ್ದಂತೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಸಹೋದರ ಹಿಂದುಗಳನ್ನು ಅವಮಾನಿಸಿಲ್ಲ, ಆದರೆ ಬಿಜೆಪಿ ಮತ್ತು ಅದರ ನಾಯಕರ ಕುರಿತು ಮಾತನಾಡಿದ್ದಾರೆ ಎಂದು ರಾಹುಲ್ ಗಾಂಧಿ ಪರ ಸಮಜಾಯಿಷಿ ನೀಡಿದ್ದಾರೆ.
ಹಿಂದುಗಳನ್ನು ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಬಗ್ಗೆ ಹಾಗೂ ಪಕ್ಷದ ನಾಯಕರ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ ಎಂದರು.
ರಾಹುಲ್ ಹೇಳಿದ್ದೇನು?:
ವಿಪಕ್ಷ ನಾಯಕನಾಗಿ ಆಯ್ಕೆಯಾದ ರಾಹುಲ್ ಗಾಂಧಿ ಅವರು ಇಂದು ಮಧ್ಯಾಹ್ನ ಲೋಕಸಭೆಯಲ್ಲಿ ತಮ್ಮ ಮೊದಲ ಭಾಷಣ ಮಾಡಿದರು. ಈ ವೇಳೆ ಅಭಯಮುದ್ರವು ಕಾಂಗ್ರೆಸ್‌ನ (Congress) ಸಂಕೇತವಾಗಿದೆ. ಅಭಯಮುದ್ರವು ನಿರ್ಭಯತೆಯ ಸಂಕೇತವಾಗಿದೆ. ಧೈರ್ಯ ಮತ್ತು ಸುರಕ್ಷತೆಯ ಸಂಕೇತವಾಗಿದೆ, ಇದು ಭಯವನ್ನು ಹೋಗಲಾಡಿಸುತ್ತದೆ. ನಮ್ಮ ಮಹಾಪುರುಷರೆಲ್ಲರೂ ಅಹಿಂಸೆ, ಭಯವನ್ನು ಹೋಗಲಾಡಿಸುವ ಬಗ್ಗೆ ಮಾತನಾಡಿದ್ದಾರೆ. ಆದರೆ ತಮ್ಮನ್ನು ತಾವು ಹಿಂದುಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತನಾಡುತ್ತಾರೆ. ನೀವು ನಿಜವಾದ ಹಿಂದುಗಳಲ್ಲ ಎಂದು ಹೇಳಿಕೆ ಕೊಟ್ಟರು.
ರಾಹುಲ್ ಗಾಂಧಿ ಈ ರೀತಿ ಹೇಳಿಕೆ ನೀಡುತ್ತಿದ್ದಂತೆಯೇ ಸಂಸತ್ತಿನಲ್ಲಿ ಗದ್ದಲ ಆರಂಭವಾಯಿತು. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿಗಳನ್ನು ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ಹಿಂದು ಸಮಾಜವನ್ನು ಹಿಂಸಾತ್ಮಕವೆಂದು ಕರೆಯುವುದು ಗಂಭೀರ ವಿಷಯವಾಗಿದೆ ಎಂದು ಪ್ರತಿಪಾದಿಸಿದರು. ಅಲ್ಲದೇ ಅಮಿತ್ ಶಾ ಅವರು, ರಾಹುಲ್ ಗಾಂದಿಯವರು ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು.