ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ , ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್‌ ಲೀಡರ್‌ಗಳ ಸಭೆಯ ಬಳಿಕ ಈ ನಿರ್ಧಾರ ಮಾಡಲಾಗಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರತಿ ಪಕ್ಷಗಳ ನಾಯಕರ ಸಭೆಯ ನಂತರ ಪ್ರಕಟಿಸಿದ್ದಾರೆ.

ಕಾಂಗ್ರೆಸ್​ ಸಂಸದೀಯ ಪಕ್ಷದ ಅಧ್ಯಕ್ಷರು ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಅವರಿಗೆ ಪತ್ರ ಬರೆದು ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ತಿಳಿಸಲಾಗಿದೆ. ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದು ವೇಣುಗೋಪಾಲ್​ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!