ಇಂದು ಬೀದರ್‌ಗೆ ರಾಹುಲ್ ಗಾಂಧಿ: ಭಾಲ್ಕಿ, ಹುಮನಾಬಾದ್‌‌ ಸಾರ್ವಜನಿಕ ಸಭೆಯಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚುನಾವಣಾ ಚಾಣಕ್ಯ ಅಮಿತ್ ಶಾ ಕಲ್ಯಾಣ ಕರ್ನಾಟಕ ಟಾರ್ಗೆಟ್ ಮಾಡಿದ ಬಳಿಕ ಇದೀಗ ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸದ ಮೂಲಕ ಕಲ್ಯಾಣ ಕರ್ನಾಟಕಕ್ಕೆ ಹೆಜ್ಜೆ ಇಟ್ಟಿದ್ದಾರೆ.

ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಭಾಲ್ಕಿಯಲ್ಲಿ ಈಶ್ವರ್ ಖಂಡ್ರೆ ಪರ ಹಾಗೂ ಹುಮ್ನಾಬಾದ್‌ನಲ್ಲಿ ರಾಜಶೇಖರ ಪಾಟೀಲ್ ಪರ ಕ್ಯಾಂಪೇನ್ ಮಾಡಲಿದ್ದಾರೆ.

ಸೋಮವಾರ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 11 ಗಂಟೆಗೆ ಬೀದರ್ ಏರಬೇಸ್ಗೆ ಆಗಮಿಸಲಿರುವ ರಾಹುಲ್ 11:30ಕ್ಕೆ ಬೀದರ್ ಏರಬೇಸ್‌ನಿಂದ ಹೆಲಿಕಾಪ್ಟರ್ ಮೂಲಕ ಭಾಲ್ಕಿಗೆ ಬರಲಿದ್ದಾರೆ.

11:40ಕ್ಕೆ ನಾಮಪತ್ರ ಸಲ್ಲಿಕೆಯ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಿ ಬಳಿಕ 1 ಗಂಟೆಗೆ ಬೃಹತ್ ಬಹಿರಂಗ ರ್ಯಾಲಿಯಲ್ಲಿ ಹಾಗೂ ಬಳಿಕ 1:30ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಭಾಗಿಯಾಗಲಿದ್ದಾರೆ.

ಬಳಿಕ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್‌ಗೆ ಪ್ರಯಾಣ ಮಾಡಲಿರುವ ರಾಹುಲ್ 1:30 ರಿಂದ 2:30ರ ವರೆಗೆ ಹುಮ್ನಾಬಾದ್ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!