ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ಮಾಡಿ ಮತ್ತಷ್ಡು ಬಲಿಷ್ಟರಾಗುವಂತೆ ಧೈರ್ಯ ತುಂಬಿದ್ದಾರೆ.
ಜಮ್ಮು-ಕಾಶ್ಮೀರ ಹಾಗು ಹರಿಯಾಣ ಚುನಾವಣಾ ಪ್ರಚಾರದಲ್ಲಿರುವ ರಾಹುಲ್ ಗಾಂಧಿ, ಬೆಳಗ್ಗೆ ಸಿದ್ಧರಾಮಯ್ಯಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
ರಾಜಕೀಯ ಷಡ್ಯಂತ್ರದ ವಿರುದ್ಧ ಹೋರಾಟ ನಡೆಸಬೇಕು, ಎದೆಗುಂದುವುದು ಬೇಡ, ಅಭಿವೃದ್ಧಿ ಕಾರ್ಯಗಳು ಮತ್ತು ಗ್ಯಾರಂಟಿ ಅನುಷ್ಠಾನ ಯಾವುದೇ ಕಾರಣಕ್ಕೂ ನಿಲ್ಲಬಾರದು. ಪೂರ್ವ ನಿಗದಿಯಂತೆ ಸಭೆ-ಸಮಾರಂಭಗಳು ನಡೆಯಬೇಕು. ನೀವು ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜಿಪಿಯ ಅಪಪ್ರಚಾರವನ್ನು ಜನರಿಗೆ ಮನವರಿಕೆ ಮಾಡಬೇಕು ಎಂದು ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.
ಪ್ರತಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವುದು ಮುಖ್ಯಮಂತ್ರಿಗಳಿಗೆ ಶಕ್ತಿ ತುಂಬಿದಂತಾಗಿದೆ.