Sunday, October 5, 2025

ವಿ.ಡಿ ಸಾರ್ವಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

2022ರ ಭಾರತ್ ಜೋಡೋ ಯಾತ್ರೆ ವೇಳೆಯಲ್ಲಿ ವಿ.ಡಿ ಸಾರ್ವಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರದ ನಾಸಿಕ್ ನ ಸ್ಥಳೀಯ ನ್ಯಾಯಾಲಯವೂಂದು ಗುರುವಾರ ಜಾಮೀನು ನೀಡಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಆರ್ ಸಿ ನರ್ವಾಡಿಯಾ ಅವರ ಮುಂದೆ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ, ನಾನು ತಪ್ಪಿತಸ್ಥನಲ್ಲ ಎಂದು ಮನವಿ ಮಾಡಿದರು.

ನ್ಯಾಯಾಲಯ ರೂ. 15,000 ಬಾಂಡ್ ನೊಂದಿಗೆ ಜಾಮೀನು ಮಂಜೂರು ಮಾಡಿತು ಎಂದು ವಕೀಲ ಮನೋಜ್ ಪಿಂಗಳೆ ತಿಳಿಸಿದರು.

ನಾಸಿಕ್ ನಿವಾಸಿ ದೇವೇಂದ್ರ ಭೂತಾಡ ಅವರು ತಮ್ಮ ವಕೀಲ ಮನೋಜ್ ಪಿಂಗಳೆ ಮೂಲಕ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನನಷ್ಟ) ಮತ್ತು 504 (ಶಾಂತಿ ಭಂಗ ತರುವ) ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರಾಹುಲ್ ಗಾಂಧಿ ವಿರುದ್ಧ ದಾಖಲಿಸಿದ್ದರು.