ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ನಲ್ಲಿ ರಾಹುಲ್ ಗಾಂಧಿ ನೀಡಿದ ‘ಹಿಂದು’ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ ಕಾಂಗ್ರೆಸ್ ನಾಯಕನನ್ನು ‘ಅಪ್ರಬುದ್ಧ ‘ಎಂದು ಹೇಳಿದ್ದಾರೆ.
ವಿರೋಧ ಪಕ್ಷದ ನಾಯಕರಾದ ನಂತರ ರಾಹುಲ್ ಗಾಂಧಿ ಪ್ರಬುದ್ಧರಾಗುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅಪಕ್ವ ಮನಸ್ಸಿನ ವ್ಯಕ್ತಿ ಮಾತ್ರ ಇಂತಹ ಟೀಕೆಗಳನ್ನು ಮಾಡುತ್ತಾನೆ ಎಂದು ಹೇಳಲು ನನಗೆ ವಿಷಾದವಿದೆ. ಹಿಂದು ಭಾರತದ ಮೂಲ ಸಮಾಜ ಮತ್ತು ಈ ದೇಶದ ಆತ್ಮ ಎಂದು ಯೋಗಿ ಹೇಳಿದರು.
ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತಮ್ಮನ್ನು ತಾವು ಹಿಂದುಗಳು ಎಂದು ಕರೆದುಕೊಳ್ಳುವವರು ‘ಹಿಂಸಾಚಾರ ಮತ್ತು ದ್ವೇಷ’ ದಲ್ಲಿ ಹಗಲಿರುಳು ನಿರತರಾಗಿದ್ದಾರೆ ಎಂದು ಹೇಳಿದ್ದು ಎನ್ಡಿಎ ಸಂಸದರನ್ನು ಕೆರಳಿಸಿದೆ .