ಸದಸ್ಯತ್ವ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ತುರ್ತು ಸಭೆ ಕರೆದ ಎಐಸಿಸಿ ಅಧ್ಯಕ್ಷ ಖರ್ಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಸದಸ್ಯತ್ವ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದಾರೆ.

ಸಂಜೆ 5:30ಕ್ಕೆ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಿಸಿಸಿ ಅಧ್ಯಕ್ಷರು, ಸಿ ಎಲ್ ಪಿ ನಾಯಕರು ಭಾಗಿಯಾಗಲಿದ್ದಾರೆ.ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಲೋಕಸಭಾ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!