ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ-ಜಗದೀಶ್ ಶೆಟ್ಟರ್ ಸುದೀರ್ಘ ಚರ್ಚೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಳಿದಿದ್ದು, ಹುಬ್ಬಳ್ಳಿಗೆ ಆಗಮಿಸಿದ ಅವರನ್ನು ಜಗದೀಶ್ ಶೆಟ್ಟರ್ ಸ್ವಾಗತಿಸಿದರು.

ಈ ವೇಳೆ ಇಬ್ಬರು ಹುಬ್ಬಳ್ಳಿಯ ವಿಮಾನ‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ್ ಸುದೀರ್ಘವಾಗಿ ಚರ್ಚೆ ನಡೆಸಿದರು.

ರಾಹುಲ್‌ ಗಾಂಧಿ- ಜಗದೀಶ್ ಶೆಟ್ಟರ್ ಸುದೀರ್ಫ ಚರ್ಚೆಯಲ್ಲಿ ಮುಖ್ಯವಾಗಿ ಚರ್ಚೆಯಾಗಿದ್ದು ಲಿಂಗಾಯತರ ವಿಚಾರ ಎನ್ನಲಾಗುತ್ತಿದೆ.
ಜಗದೀಶ್ ಶೆಟ್ಟರ್ ಕುಟುಂಬದ ರಾಜಕೀಯ ಇತಿಹಾಸ ತಿಳಿದುಕೊಂಡ ರಾಹುಲ್, ತಾವೇ ಇಡೀ ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು. ಬಸವ ತತ್ವ, ಬಸವಣ್ಣನವರು ವಿಚಾರಧಾರೆಗಳ‌ ಬಗ್ಗೆ ಕಾಂಗ್ರೆಸ್ ಬಹಳ ನಂಬಿಕೆ ಇರುವಂತ ಪಕ್ಷ ಎಂದು ಸಲಹೆ ನೀಡಿದರು.

ರಾಹುಲ್ ಜೊತೆಗಿನ ಮಾತುಕತೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಬಾಗಿಯಾಗಿದ್ದರು. ಜಗದೀಶ್ ಶೆಟ್ಟರ್ ಪಕ್ಷಕ್ಕೆ ಸೇರಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಅನುಕೂಲ ಆಗಿದೆ. ಬಿಜೆಪಿ ಲಿಂಗಾಯತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ರಾಹುಲ್ ಗಟ್ಟಿಯಾಗಿ ಮಾತನಾಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!