ಪ್ರಧಾನಿ ಹೊರಟ ಬೆನ್ನಲ್ಲೇ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10 ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತಿದ್ದಾರೆ. ಮೇ 31ರಂದು ಹೊರಟು ಸುಮಾರು 10 ದಿನಗಳ ಕಾಲ ವಿವಿಧ ನಗರಗಳಿಗೆ ರಾಹುಲ್ ಭೇಟಿ ನೀಡಲಿದ್ದಾರೆ.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಗೂ ಮುನ್ನವೇ ರಾಹುಲ್ ಪ್ರವಾಸದ ಬಗ್ಗೆ ಎಲ್ಲೆಡೆ ಕುತೂಹಲ ಮೂಡಿದೆ. ಸಂಸತ್ ಸದಸ್ಯತ್ವ ರದ್ದಾದ ಬಳಿಕ ರಾಹುಲ್ ಅವರ ಮೊದಲ ವಿದೇಶ ಪ್ರವಾಸ ಇದಾಗಿದೆ.

ಈ ಪ್ರವಾಸದ ಭಾಗವಾಗಿ ಅವರು ಜೂನ್ 4 ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ಗಾರ್ಡನ್‌ನಲ್ಲಿ ಆಯೋಜಿಸಲಾದ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ರ್ಯಾಲಿಯಲ್ಲಿ ಸುಮಾರು 5 ಸಾವಿರ ಅನಿವಾಸಿ ಭಾರತೀಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಭೇಟಿಯ ವೇಳೆ ರಾಹುಲ್ ಗಾಂಧಿ ಅವರು ರಾಜಕೀಯ ನಾಯಕರು, ಉದ್ಯಮಿಗಳು ಮತ್ತು ಉದ್ಯಮ ದಿಗ್ಗಜರನ್ನು ಭೇಟಿ ಮಾಡಲಿದ್ದಾರೆ.

ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಜೂನ್ 22 ರಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರು ಪ್ರಧಾನ ಮಂತ್ರಿಯ ಗೌರವಾರ್ಥ ಭೋಜನವನ್ನು ಆಯೋಜಿಸಲಿದ್ದಾರೆ. ಈ ಭೇಟಿಗಳು ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಪಡಿಸುತ್ತದೆ ಎಂದು ಶ್ವೇತಭವನವು ಈಗಾಗಲೇ ಘೋಷಿಸಿದೆ.

ಕಳೆದ ಮಾರ್ಚ್ ನಲ್ಲಿ ಬ್ರಿಟನ್ ಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಲಂಡನ್ ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರ ಹೇಳಿಕೆಗಳು ಭಾರತದಲ್ಲಿ ಭಾರೀ ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!