ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮತ್ತು ಇತ್ತೀಚೆಗೆ ಸಂಸತ್ತಿನಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೇಲಿನ ಜೈಲು ಶಿಕ್ಷೆಯ ವಿರುದ್ಧ ಸೋಮವಾರ ಸೂರತ್ ನ್ಯಾಯಾಲಯದಲ್ಲಿಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಮಾರ್ಚ್ 23 ರಂದು ದೋಷಿ ಎಂದು ಘೋಷಿಸಲಾಗಿದೆ. ಅದಲ್ಲದೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ರಾಹುಲ್ ಗಾಂಧಿ ಅವರಿಗೆ ಜಾಮೀನನ್ನೂ ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಕಾಲಾವಕಾಶವನ್ನು ಕೂಡ ಒದಗಿಸಲಾಗಿದೆ. ಈ ಮಧ್ಯೆ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.