Sunday, November 27, 2022

Latest Posts

ರಾಹುಲ್ ಗಾಂಧಿ ಈಗ ಥೇಟ್ ಸದ್ದಾಂ ಹುಸೇನ್‌ ತರ ಕಾಣುತ್ತಾರೆ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ವ್ಯಂಗ್ಯ

ಹೊಸದಿಂಗತ ಡಿಜಿಟಲ್‌ ಡೆಸ್ಕ್‌
ರಾಹುಲ್ ಗಾಂಧಿ ಅವರು ಈಗ ಡೇಟ್‌ ಇರಾನ್‌ ಸರ್ವಾಧಿಕಾರಿ ಸದ್ದಾಂ ಹುಸೇನ್‌ಗೆ ಅವರಂತೆ ಕಾಣುತ್ತಿದ್ದಾರೆ  ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ವ್ಯಂಗ್ಯವಾಡಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಅಹಮದಾಬಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಬಿಸ್ವಾ, ಭಾರತ್‌ ಜೋಡೋ ಯಾತ್ರೆ ಬಗ್ಗೆ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿಯವರು ಸೋಲಿನ ಭಯದಿಂದಾಗಿ ಚುನಾವಣೆಗೂ ಮುನ್ನ ಗುಜರಾತ್‌ಗೆ ಭೇಟಿ ನೀಡಿಲ್ಲ ಎಂದು ಕುಟುಕಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಆಗಮಿಸಲು ಬಾಲಿವುಡ್ ತಾರೆಯರಿಗೆ  ಕಾಂಗ್ರೆಸ್ ಹಣ ನೀಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!