ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬೈಕ್ ಟ್ಯಾಕ್ಸಿ ಚಾಲಕರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಲಕ್ಷಾಂತರ ಅಸಂಘಟಿತ ಕಾರ್ಮಿಕರ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ.
ರಾಹುಲ್ ಗಾಂಧಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಚಾಲಕರು ಎದುರಿಸುತ್ತಿರುವ ಸಂಕಷ್ಟವನ್ನು ವಿವರಿಸಿದರು. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.