ರಾಹುಲ್​ ಗಾಂಧಿ, ಪ್ರಿಯಾಂಕಾ ನೆಪೋಟಿಸಂ ಮಕ್ಕಳು: ನಟಿ ಕಂಗನಾ ರಣಾವತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಕಂಗನಾ ರಣಾವತ್​ (Kangana Ranaut) ಅವರು ರಾಜಕೀಯ ಎಂಟ್ರಿ ಕೊಟ್ಟಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್​ ಗುಡುಗಲು ಆರಂಭಿಸಿದ್ದಾರೆ.

ಇಷ್ಟು ದಿನ ಬಾಲಿವುಡ್​ ಮಂದಿಯನ್ನು ಟೀಕಿಸುತ್ತಿದ್ದ ಅವರು ಈಗ ಕಾಂಗ್ರೆಸ್​ (Congress) ಪಕ್ಷದವರನ್ನು ಟೀಕಿಸುತ್ತಿದ್ದಾರೆ. ಅದಕ್ಕೆ ಕಾರಣ ನೆಪೋಟಿಸಂ.

ಕಂಗನಾ ರಣಾವತ್​ ಅವರಿಗೆ ನೆಪೋಟಿಸಂ ಎಂದರೆ ಆಗುವುದಿಲ್ಲ. ಅವಕಾಶಗಳು ಕೇವಲ ವಂಶ ಪಾರಂಪರ್ಯವಾಗಿ ಸಿಗುವುದನ್ನು ಅವರು ವಿರೋಧಿಸುತ್ತಾ ಬಂದಿದ್ದಾರೆ. ಈಗ ಅವರು ರಾಹುಲ್​ ಗಾಂಧಿ (Rahul Gandhi) ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ರಾಹುಲ್​ ಗಾಂಧಿಯನ್ನು ನೆಪೋಟಿಸಂ ಮಗು ಎಂದು ಕಂಗನಾ ಕರೆದಿದ್ದಾರೆ.

ಟೈಮ್ಸ್​ ನೌ ನಡೆಸಿದ ಸಂದರ್ಶನದಲ್ಲಿ ಕಂಗನಾ ರಣಾವತ್​, ‘ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು. ಆ ಪಕ್ಷದಲ್ಲಿ ಇರುವ ನೆಪೋಟಿಸಂ ನನಗೆ ಬಹಳ ತೊಂದರೆ ಎನಿಸುತ್ತಿತ್ತು. ಯಾಕೆಂದರೆ ಚಿತ್ರರಂಗದಲ್ಲಿ ನೆಪೋಟಿಸಂ ಕಾರಣದಿಂದಲೇ ನಾನು ಟಾರ್ಗೆಟ್​ ಆಗಿದ್ದೆ. ಅದನ್ನು ನಾನು ನೇರವಾಗಿಯೇ ವಿರೋಧಿಸಿದೆ. ಅದು ನನ್ನನ್ನು ಶೋಷಣೆ ಮಾಡುತ್ತಿತ್ತು. ನೆಪೋಟಿಸಂ, ಗುಂಪುಗಾರಿಕೆ, ವಂಶ ಪಾರಂಪರ್ಯ ರಾಜಕೀಯ. ಈ ಕಾರಣದಿಂದಲೇ ನಾನು ಕಾಂಗ್ರೆಸ್​ ಪಕ್ಷವನ್ನು ಇಷ್ಟಪಡುವುದಿಲ್ಲ’ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ ಅವರ ಮಕ್ಕಳಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಬಗ್ಗೆ ಒಂದೇ ಪದದಲ್ಲಿ ವಿವರಿಸಿ ಎಂದು ಕೇಳಿದ್ದಕ್ಕೆ, ‘ನೆಪೋಟಿಸಂ ಮಕ್ಕಳು’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ. ‘ಅವರು ಮಂಗಳ ಗ್ರಹದಿಂದ ಬಂದಿದ್ದಾರೆ ಎಂಬಷ್ಟು ವಿಚಿತ್ರವಾಗಿದ್ದಾರೆ’ ಎಂದು ಅವರು ಟೀಕೆ ಮಾಡಿದ್ದಾರೆ. ಇದಕ್ಕೆ ರಾಹುಲ್​ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!