ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, 500 ರೂ.ಗೆ ಎಲ್‌ಪಿಜಿ ಸಿಲಿಂಡರ್: ರಾಹುಲ್ ಗಾಂಧಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಗುಜರಾತ್‌ನಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ 3 ಲಕ್ಷ ರೂ.ವರೆಗಿನ ಸಾಲ ಮನ್ನಾ, ಕೇವಲ 500 ರೂ. ಗಳಿಗೆ ಎಲ್‌ಪಿಜಿ ಸಿಲಿಂಡರ್, ರೈತರಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರವಸೆ ನೀಡಿದ್ದಾರೆ.
ಈ ವರ್ಷದ ಕೊನೆಯಲ್ಲಿ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದಡೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಅಹಮದಾಬಾದ್‌ನಲ್ಲಿ ‘ಪರಿವರ್ತನ್ ಸಂಕಲ್ಪ್ ರ್ಯಾಲಿ’ಯನ್ನುದ್ದೇಶಿಸಿ ಮಾತನಾಡಿದ ಗಾಂಧಿ,  ಗುಜರಾತ್ ಜನರಿಗೆ 10 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿ, 3,000 ಆಂಗ್ಲ ಮಾಧ್ಯಮ ಶಾಲೆಗಳ ನಿರ್ಮಾಣ ಮತ್ತು ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಭರವಸೆಗಳನ್ನು ನೀಡಿದರು.
‘ಇಲ್ಲಿನ ಬಿಜೆಪಿ ಸರ್ಕಾರ ಉನ್ನತ ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡುತ್ತದೆ, ಆದರೆ ಅವರು ರೈತರ ಸಾಲ ಮನ್ನಾ ಮಾಡಿರುವ ವಿಚಾರವನ್ನ ಕೇಳಿದ್ದೀರಾ? ಎಂದು ಗಾಂಧಿ ಪ್ರಶ್ನಿಸಿದರು ಗುಜರಾತ್‌ನಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ ಪ್ರತಿಯೊಬ್ಬ ರೈತರ 3 ಲಕ್ಷ ರೂ.ವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ನಾನು ಭರವಸೆ ನೀಡುತ್ತೇನೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!