ರಾಹುಲ್ ಗಾಂಧಿ ರಾಯ್‌ಬರೇಲಿಗಿಂತ ಪಾಕಿಸ್ತಾನದಲ್ಲಿ ಸ್ಪರ್ಧಿಸಲಿ: ಆಚಾರ್ಯ ಪ್ರಮೋದ್ ಕೃಷ್ಣಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಈ ಬಾರಿ ವಯನಾಡು ಬಳಿಕ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದು, ರಾಹುಲ್ ಗಾಂಧಿ ಈ ನಡೆಯನ್ನು ಬಿಜೆಪಿ ಗೇಲಿ ಮಾಡಿದೆ.

ಇದೀಗ ಕಾಂಗ್ರೆಸ್ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ , ರಾಹುಲ್ ಗಾಂಧಿ ಜನಪ್ರಿಯತೆ ಭಾರತಕ್ಕಿಂತ ಪಾಕಿಸ್ತಾನದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಗಿಂತ ಪಾಕಿಸ್ತಾನದ ರಾವಲ್ಪಿಂಡಿಯಿಂದ ಸ್ಪರ್ಧಿಸಲಿ ಎಂದು ಹೇಳಿದ್ದಾರೆ.

ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿಗೆ ಟಿಕೆಟ್ ನಿರಾಕರಿಸಿರುವುದಕ್ಕೆ ಕೆರಳಿ ಕೆಂಡವಾಗಿರುವ ಕಾಂಗ್ರೆಸ್ ಮಾಜಿ ನಾಯಕ ಆಚಾರ್ಯ ಪ್ರಮೋದ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ರಾಹುಲ್ ಗಾಂಧಿ ಸ್ವಂತ ತಂಗಿಯನ್ನೇ ರಾಜಕೀಯದಿಂದ ಸೈಡ್‌ಲೈನ್ ಮಾಡಿದ್ದಾರೆ. ಗಾಂಧಿ ಕುಟಂಬದ ಷಡ್ಯಂತ್ರಕ್ಕೆ ಪ್ರಿಯಾಂಕಾ ಗಾಂಧಿ ಬಲಿಯಾಗಿದ್ದಾರೆ. ಪ್ರಿಯಾಂಕಾಗೆ ಟಿಕೆಟ್ ತಪ್ಪಿಸಿ ಗೆಲುವಿಗಾಗಿ ರಾಯ್‌ಬರೇಲಿಗೆ ಪಲಾಯನ ಮಾಡಿದ್ದಾರೆ. ಇದು ರಾಹುಲ್ ಗಾಂಧಿಗಾಗಿ ಪ್ರಿಯಾಂಕಾ ಗಾಂಧಿ ರಾಜಕೀಯ ಭವಿಷ್ಯವನ್ನೇ ಬಲಿಕೊಡಲಾಗಿದೆ ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ.

ರಾಹುಲ್ ಗಾಂಧಿ ಜನಪ್ರಿಯತೆ ಭಾರತದಲ್ಲಿ ಹೆಚ್ಚಾಗಿಲ್ಲ. ಆದರೆ ಪಾಕಿಸ್ತಾನದಲ್ಲಿ ಹೆಚ್ಚಾಗಿರುವ ಸಾಧ್ಯತೆ ಇದೆ. ಹೀಗಾಗಿ ರಾಯ್‌ಬರೇಲಿ ಬದಲು ಪಾಕಿಸ್ತಾನದ ರಾವಲ್ಪಿಂಡಿಯಿಂದ ಸ್ಪರ್ಧಿಸಿದರೆ ಗೆಲುವಿನ ಸಾಧ್ಯತೆ ಹೆಚ್ಚು ಎಂದು ಆಚಾರ್ಯ ಪ್ರಮೋದ್ ಹೇಳಿದ್ದಾರೆ. ರಾಹುಲ್ ಗಾಂಧಿ ಅಮೇಥಿಯಿಂದ ದೂರ ಉಳಿದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಹೆಚ್ಚಿಸಿದೆ. ಕಾರಣ ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಿದ್ದಾರೆ. ಇದೀಗ ಏಕಾಏಕಿ ರಾಯ್‌ಬರೇಲಿಗೆ ತೆರಳಿದ್ದಾರೆ. ಇತ್ತ ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿ ಪರ ಕೆಲಸ ಮಾಡಿದ್ದಾರೆ. ಇದೀಗ ಪ್ರಿಯಾಂಕಗಾಗಿ ಕೆಲಸ ಮಾಡಿದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!