ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.
ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಸಿಎಂ ಹಾಗೂ ಡಿಸಿಎಂ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದರು.
ಮುಖ್ಯಮಂತ್ರಿಗಳು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು. ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


