ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ವಿಚಾರಣೆಗೆ ಹಾಜರಾದ ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯವು ಸೋಮವಾರ 10 ಗಂಟೆಗಳ ಕಾಲ ವಿಚಾರಣೆ ನಡೆಸಿತು. ನಿನ್ನೆಗೆ ವಿಚಾರಣೆ ಮುಗಿಯದ ಕಾರಣ ರಾಹುಲ್‌ ಗಾಂಧಿ ಇಂದು ಪುನಃ ವಿಚಾರಣೆಗೆ ಹಾಜರಾಗಿದ್ದಾರೆ.

ನಿನ್ನೆ ವಿಚಾರಣೆ ವೇಳೆ ರಾಹುಲ್‌ ಗಾಂಧಿ ಅಸಮರ್ಪಕ ಉತ್ತರದಿಂದ ಸಮಾಧಾನವಾಗದ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಇಂದು ದಾಖಲೆ ಸಮೇತ ವಿಚಾರಣೆಗೆ ಬನ್ನಿ ಎಂದು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಸಮನ್ಸ್‌ ವಿರೋಧಿಸಿ ಕಾಂಗ್ರೆಸ್‌ ನಾಯಕರು ಇಂದೂ ಸಹ ಪ್ರತಿಭಟನೆ ನಡೆಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಅಧೀರ್ ರಂಜನ್ ಚೌಧರಿ, ರಣದೀಪ್‌ ಸುರ್ಜೆವಾಲಾ, ಗೌರವ್ ಗೊಗೋಯ್, ದೀಪೇಂದರ್ ಸಿಂಗ್ ಹೂಡಾ, ರಂಜೀತ್ ರಂಜನ್, ಇಮ್ರಾನ್ ಪ್ರತಾಪ್‌ಗರ್ಹಿ ಮತ್ತು ಇತರರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!