ಹೊಸದಿಗಂತ ಡಿಜಿಟಲ್ ಡೆಸ್ಕ್ :
ಶುಕ್ರವಾರ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಈ ಹಿನ್ನೆಲೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ತಪ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕೆಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅವರು ಮತಗಳ್ಳತನ ಆರೋಪ ಮಾಡಿದ್ದರು. ಕೇಂದ್ರದ ಈ ಕ್ರಮ ವಿರೋಧಿಸಿ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ದಾಖಲೆ ಬಿಡುಗಡೆ ಮಾಡಲಿದ್ದಾರೆ. ಈ ಹಿನ್ನೆಲೆ ಕೆಲವೆಡೆ ಸಂಚಾರ್ ಬಂದ್ ಮಾಡಿ, ಅವುಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ.