ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿ:ಕಮಲನಾಥ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಕಮಲ್ ನಾಥ್ ಹೇಳಿದ್ದು ಹೀಗೆ… “2024ರ ಲೋಕಸಭಾ ಚುನಾವಣೆಯ ಬಗ್ಗೆ ಯೋಚಿಸಿದರೆ ಇಲ್ಲಿಯವರೆಗೆ ರಾಹುಲ್ ಗಾಂಧಿ ವಿರೋಧ ಪಕ್ಷಗಳ ನಾಯಕರಷ್ಟೇ ಅಲ್ಲ ಪ್ರಧಾನಿ ಅಭ್ಯರ್ಥಿಯೂ ಆಗಿದ್ದಾರೆ” ಎಂದರು.

ರಾಹುಲ್ ಗಾಂಧಿ ರಾಜಕೀಯದಲ್ಲಿದ್ದುದು ಅಧಿಕಾರಕ್ಕಾಗಿ ಅಲ್ಲ, ದೇಶದ ಜನರಿಗಾಗಿ. ಯಾರನ್ನಾದರೂ ಅಧಿಕಾರಕ್ಕೆ ತರಲು ಜನರಿಗೆ ಅವಕಾಶವಿದೆ. ಇದೇ ವೇಳೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಶ್ಲಾಘಿಸಿದರು. ಪ್ರಪಂಚದ ಇತಿಹಾಸದಲ್ಲಿ ಯಾರೂ ಇಷ್ಟು ಸುದೀರ್ಘ ಪಾದಯಾತ್ರೆಯನ್ನು ಮಾಡಿಲ್ಲ ಎಂದರು.

ವಿರೋಧ ಪಕ್ಷಗಳೆಲ್ಲ ಸೇರಿ 2024ರಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂದು ಈವರೆಗೆ ಯಾರೂ ಘೋಷಿಸಿಲ್ಲ. ಕಮಲ್ ನಾಥ್ ಮಾತ್ರ ಮೊದಲ ಬಾರಿಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಇಂತಹ ಕಾಮೆಂಟ್ ಮಾಡಿದ್ದಾರೆ. ಭವಿಷ್ಯದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಮತ್ತೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆಯೇ? ಎಂಬ ಪ್ರಶ್ನೆಗೆ ಕಮಲ್ ನಾಥ್ ಪ್ರತಿಕ್ರಿಯಿಸಿದ್ದಾರೆ. “ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಪ್ರತಿಕ್ರಿಯಿಸುವುದಿಲ್ಲ. ಆದರೆ, ದೇಶದ್ರೋಹಿಗಳಿಗೆ, ಪಕ್ಷಕ್ಕೆ ದ್ರೋಹ ಬಗೆದವರಿಗೆ, ಪಕ್ಷದ ಕಾರ್ಯಕರ್ತರ ವಿಶ್ವಾಸಕ್ಕೆ ಧಕ್ಕೆ ತಂದವರಿಗೆ ನಮ್ಮ ಪಕ್ಷದಲ್ಲಿ ಸ್ಥಾನವಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!