ಲೋಕಸಭೆಗೆ ರಾಹುಲ್‌ ಗಾಂಧಿ: ಟ್ವಿಟರ್ ಖಾತೆಯಲ್ಲೂ ಬದಲಾಯಿತು ಬಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯ ಬಯೊ ಮಾಹಿತಿಯನ್ನು ಬದಲಾವಣೆ ಮಾಡಿಕೊಂಡಿದ್ದಾರೆ.

ರಾಹುಲ್ ಅವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ನಂತರ ಲೋಕಸಭಾ ಸ್ಥಾನದಿಂದ ಅವರನ್ನು ಅನರ್ಹಗೊಳಿಸಲಾಗಿತ್ತು. ಆ ಕ್ಷಣ ತಮ್ಮ ಟ್ವಿಟರ್‌ನ ಬಯೋದಲ್ಲಿ “DisQualified MP” ಎಂದು ನಮೂದಿಸಿದ್ದರು. ಇದೀಗ ಅದನ್ನು Member of Parliament ಎಂದು ಬದಲಿಸಿದ್ದಾರೆ.

ಸೋಮವಾರ ಲೋಕಸಭೆ ಸಚಿವಾಲಯ, ರಾಹುಲ್‌ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.

ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್‌ ನ್ಯಾಯಾಲಯ, ಮಾರ್ಚ್‌ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!