ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ರನ್ನು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಲಿದ್ದಾರೆ.
ಅರವಿಂದ ಕೇಜ್ರಿವಾಲ್ ಅಥವಾ ಅವರ ಕುಟುಂಬದವರನ್ನು ಭೇಟಿ ಮಾಡಿ ಕಾನೂನು ನೆರವು ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಕೇಜ್ರಿವಾಲ್ ಅವರು ಇಡಿ ಜಾರಿಗೊಳಿಸಿದ್ದ 9 ಸಮನ್ಸ್‌ಗಳಿಗೆ ಉತ್ತರಿಸದೇ, ಸತತವಾಗಿ ವಿಚಾರಣೆಗೆ ಗೈರಾಗಿದ್ದರು. ಅಲ್ಲದೇ, ಅಕ್ರಮ ಹಣ ವರ್ಗಾವಣೆ ಕುರಿತಂತೆ ಜಾರಿಗೊಳಿಸಲಾಗಿದ್ದ ಸಮನ್ಸ್ ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಲಿಲ್ಲ.