ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದಿನಿಂದ ಎರಡು ದಿನಗಳ ಕಾಲ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಅವರ ಭೇಟಿಯ ವೇಳೆ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದು, ಜನಾಂಗೀಯ ಘರ್ಷಣೆಯಿಂದ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲಿದ್ದಾರೆ. ಇಂಫಾಲ್ ಮತ್ತು ಚುರಚಂದಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರದಲ್ಲಿ 110 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.