ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂದಿನಿಂದ ಎರಡುದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದು, ವೈಷ್ಣೋ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಈ ಬಗ್ಗೆ ಜಮ್ಮು ಕಾಶ್ಮೀರದ ಕಾಂಗ್ರೆಸ್ ಅಧ್ತಕ್ಷ ಗುಲಾಂ ಅಹಮದ್ ಮಿರ್ ಮಾಹಿತಿ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕಳೆದ ಹಲವಾರು ವರ್ಷಗಳಿಂದ ವೈಷ್ಣೋ ದೇವಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಕಾರಣಾಂತರಗಳಿಂದ ಕಳೆದ 3 ವರ್ಷಗಳಿಂದ ಅವರು ಬರಲು ಸಾಧ್ಯವಾಗಿರಲಿಲ್ಲ. ಕಳೆದ ತಿಂಗಳು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದರು.
ಬಳಿಕ ಜಮ್ಮುವಿನಲ್ಲಿ ಕಾಂಗ್ರೆಸ್ ಪಕ್ಷದ ಸಣ್ಣ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ನಂತರ ಸ್ಥಳೀಯ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಲಿ್ದ್ದಾರೆ.
ಈ ಭೇಟಿಯ ಬಳಿಕ ರಾಹುಲ್ ಗಾಂಧಿ ಲಡಾಖ್ ಭೇಟಿ ನೀಡಲು ಯೋಜಿಸುತ್ತಿದ್ದಾರೆ ಎಂದು ಮಿರ್ ಮಾಹಿತಿ ನೀಡಿದರು.