Wednesday, June 7, 2023

Latest Posts

ಇಂದು ಕೋಲಾರಕ್ಕೆ ರಾಹುಲ್ ಗಾಂಧಿ: ಜೈ ಭಾರತ್‌ ಸಮಾವೇಶದಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು ಇಂದಿನಿಂದ 2 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇಂದು(ಏಪ್ರಿಲ್ 16) ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶ ಆಯೋಜಿಸಲಾಗಿದ್ದು, ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ಸಮಾವೇಶಕ್ಕೆ ಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ,‌ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರ ಹಾಗೂ ರಾಜ್ಯದ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಸಮಾವೇಶ ಆರಂಭವಾಗಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ರಾಹುಲ್ ಗಾಂಧಿ ಪ್ರವಾಸ ವೇಳಾಪಟ್ಟಿ :
ಬೆಳಗ್ಗೆ 11.50ಕ್ಕೆ ಬೆಂಗಳೂರು ಏರ್​ಪೋರ್ಟ್​​ಗೆ ರಾಹುಲ್ ಗಾಂಧಿ ಆಗಮಿಸಲಿದ್ದು, ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ಆಗಮಿಸಲಿದ್ದಾರೆ. ಕೋಲಾರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಿ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್​ನಲ್ಲಿ ವಿಶ್ರಾಂತಿ ಪಡೆದು ಸಂಜೆ 5.30ಕ್ಕೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜೊತೆ ಸಂವಾದ ನಡೆಸಲಿದ್ದಾರೆ.

ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್​ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್​ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!