ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕಾನ್ಪುರ ನಿವಾಸಿ ಮನೆಗೆ ರಾಹುಲ್ ಗಾಂಧಿ ಭೇಟಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಕಾನ್ಪುರ ನಿವಾಸಿ ಶುಭಂ ದ್ವಿವೇದಿ ಅವರ ಕುಟುಂಬವನ್ನು ಲೋಕಸಭಾ ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿಯಾದರು.

ತಮ್ಮ ಸಂಸದೀಯ ಕ್ಷೇತ್ರವಾದ ರಾಯ್‌ಬರೇಲಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಇಂದು ತಮ್ಮ ಈ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೇಠಿಗೆ ಭೇಟಿ ನೀಡಿದರು. ಬಳಿಕ ಕಾನ್ಪುರಕ್ಕೆ ತೆರಳಿ, ದಿವಂಗತ ಶುಭಂ ದ್ವಿವೇದಿ ಅವರ ಮನೆಗೆ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ನೆನಪಿನಲ್ಲಿ ಸಂಸತ್ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!